ಮಂಗಳೂರು: ಗುರುಪುರ ತಾಲೂಕಿನ ಮಳಲಿ ಗ್ರಾಮದಲ್ಲಿ ಜುಮ್ಮಾ ಮಸೀದಿ ನವೀಕರಣದ ವೇಳೆ ಹಿಂದೂ ದೇವಸ್ಥಾನ ಪತ್ತೆಯಾದ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಹಿಂದೂ ಸಂಘಟನೆಗಳಿಂದ ಪೂರ್ವಸಿದ್ದತೆ ಸಭೆ ನಡೆಯಿತು.

ಸಭೆಯಲ್ಲಿ ಶಾಸಕ ಡಾ ಭರತ್ ಶೆಟ್ಟಿ, ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ಹಿಂದೂ ಸಂಘಟನೆಯ ಪ್ರಮುಖರು, ಸ್ಥಳೀಯ ಜನ ಪ್ರತಿನಿಧಿಗಳು, ಊರಿನ ಹಿರಿಯರು ಭಾಗವಹಿಸಿದ್ದರು.

