ಬೆಳ್ತಂಗಡಿ: ಎಸ್. ಡಿ. ಎಂ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್. ಡಿ. ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ, ಶಿಕ್ಷಣ ತಜ್ಞ ಡಾ.ಬಿ.ಯಶೋವರ್ಮ(66) ಅನಾರೋಗ್ಯದಿಂದಾಗಿ ಮೇ.22 ರಂದು ರಾತ್ರಿ ಸಿಂಗಾಪುರದಲ್ಲಿ ನಿಧನರಾದರು.

ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ಬಿ.ಯಶೋವರ್ಮ ರವರು ಸಿಂಗಾಪೂರಕ್ಕೆ ಚಿಕಿತ್ಸೆಗಾಗಿ ತೆರಳಿದ್ದರು.
ಯಶೋವರ್ಮ ರವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರಾಗಿದ್ದು, ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಅಭಿವೃದ್ದಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.