ಕಾಸರಗೋಡು: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ಪೊಲೀಸರಿಂದ ತಪ್ಪಿಸಿ ಆರೋಪಿಯೋರ್ವ ಪರಾರಿಯಾದ ಘಟನೆ ವಿದ್ಯಾನಗರದಲ್ಲಿ ನಡೆದಿದೆ.
ಪರಾರಿಯಾದ ಆರೋಪಿಯನ್ನು ಆಲಂಪಾಡಿಯ ಆಮಿರಾಲಿ ಎನ್ನಲಾಗಿದೆ.
ಆಮಿರಾಲಿ ಯನ್ನು ಕಣ್ಣೂರು ಸೆಂಟ್ರಲ್ ಜೈಲಿನಿಂದ ಕಾಸರಗೋಡು ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆದುಕೊಂಡು ಬರುತ್ತಿದ್ದ ವೇಳೆ ವಿದ್ಯಾನಗರ ಜಂಕ್ಷನ್ ಬಳಿ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಆಮಿರಾಲಿ 20ಕ್ಕೂ ಅಧಿಕ ಪ್ರಕರಣದ ಆರೋಪಿಯಾಗಿದ್ದು, ಪರಾರಿಯಾದ ಆತನಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.