ಉಳ್ಳಾಲ: ಕ್ಷುಲ್ಲಕ ವಿಚಾರದ ಹಿನ್ನೆಲೆ ಗುಂಪೊಂದು ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲದ ಅಜ್ಜಿನಡ್ಕ ಎಂಬಲ್ಲಿ ಉಚ್ಚಿಲ ಬಳಿ ಇಂದು ಮುಂಜಾನೆ ನಡೆದಿದೆ.
ಅಜ್ಜಿನಡ್ಕ ನಿವಾಸಿ ಆರಿಫ್ (28) ಚೂರಿ ಇರಿತಕ್ಕೊಳಗಾದ ವ್ಯಕ್ತಿ.

ಆರಿಫ್ ಇಂದು ಮುಂಜಾನೆ ದಕ್ಕೆ ಮೀನು ಮಾರ್ಕೆಟ್‌ಗೆ ಹೋಗಿ ದ್ವಿಚಕ್ರ ವಾಹನದಲ್ಲಿ ವಾಪಸ್ ಮನೆ ಕಡೆ ಬರುವ ವೇಳೆ ಹಳೆ ವೈಷಮ್ಯದ ಕಾರಣಕ್ಕೆ ನಾಲ್ವರ ತಂಡ ಒಂದು ವಾಹನದಲ್ಲಿ ಬಂದು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ಆರಿಫ್‌ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.