ಬೆಂಗಳೂರು: 7 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಇಂದು (ಮೇ 24) ಬಿಜಿಪಿ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ.
ಎಸ್ಸಿ ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಹೇಮಲತಾ ನಾಯಕ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಎಸ್.ಕೇಶವಪ್ರಸಾದ್ಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಬಸವರಾಜ ಹೊರಟ್ಟಿಗೆ ಬಿಜೆಪಿ ಟಿಕೆಟ್ ಫೈನಲ್ ಮಾಡಿದೆ. ಈ ಮೂಲಕ ಪಕ್ಷದ ಉಪಾಧ್ಯಕ್ಷ ಬಿವೈ ವಿಜಯೇಂದ್ರಗೆ ಬಾರಿ ನಿರಾಸೆ ಮೂಡಿದೆ.
ಪರಿಶಿಷ್ಟ ಜಾತಿ (ಬಲಗೈ) ಛಲವಾದಿ ನಾರಾಯಣಸ್ವಾಮಿ, ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಹೇಮಲತಾ ನಾಯಕ, ವೀರಶೈವ ಲಿಂಗಾಯತ ಸಮುದಾಯದ ಲಕ್ಷ್ಮಣ ಸವದಿ, ಹಿಂದುಳಿದ ವರ್ಗಕ್ಕೆ ಸೇರಿರುವ ಎಸ್.ಕೇಶವಪ್ರಸಾದ್ ಹೆಸರನ್ನು ಪ್ರಕಟಿಸಲಾಗಿದೆ.
ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನ. ಮಧ್ಯಾಹ್ನ 3ಗಂಟೆಯೊಳಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬೇಕು. ಇಂದು ಕೊನೆ ದಿನಾಂಕವಾದರೂ ಬಿಜೆಪಿ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿರಲಿಲ್ಲ. ಇನ್ನು ನೇರವಾಗಿ ಅಭ್ಯರ್ಥಿಗಳಿಗೆ ಕರೆ ಮಾಡಿ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಹೈಕಮಾಂಡ್ ಸೂಚನೆ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ.