ಮಂಗಳೂರು: ನಗರ ಹೊರ ವಲಯದ ಮಳಲಿ ಮಸೀದಿ ನವೀಕರಣ ಸಂದರ್ಭ ಗೊಂದಲ ಉಂಟಾದ ಹಿನ್ನೆಲೆ ಈಗಾಗಲೇ ಕೋರ್ಟ್ ಆದೇಶದಂತೆ ಕಾಮಗಾರಿ ಸ್ಥಗಿತಗೊಳಿಸಿ ಶಾಂತಿ ಕಾಪಾಡಲಾಗಿದ್ದು, ಮತ್ತೊಂದೆಡೆ ಹಿಂದೂ ಸಂಘಟನೆಗಳು ಮೇ. 25 ರಂದು ತಾಂಬೂಲ ಪ್ರಶ್ನೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆ ಮಳಲಿ ಮಸೀದಿ ಸುತ್ತ ಮುತ್ತ ಸೆಕ್ಷನ್ 144ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ತೆಂಕ ಉಳಿಪಾಡಿಯ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಪೂರ್ವ ವಿಚಾರ ತಿಳಿದುಕೊಳ್ಳುವ ನಿಟ್ಟಿನಲ್ಲಿ ತಾಂಬೂಲ ಪ್ರಶ್ನೆ ಏರ್ಪಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಸೀದಿ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಮೇ 24ರ ರಾತ್ರಿಯಿಂದ ಮೇ 26ರ ಬೆಳಗ್ಗೆ 6 ಗಂಟೆಯ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.