ಪುತ್ತೂರು: ತುಳು ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ‘ರಾಜ್ ಸೌಂಡ್ಸ್ & ಲೈಟ್ಸ್’ ತುಳು ಸಿನಿಮಾ, ವಿಶ್ವ ತುಳು ಸಿನಿಮಾ ಪ್ರೀಮಿಯರ್ ಶೋನಲ್ಲಿ ಬಹಳ ಮೆಚ್ಚುಗೆಗೆ ಪಾತ್ರವಾಗಿತ್ತು. ಇದರ ಬೆನ್ನಲ್ಲೇ ಕರಾವಳಿ ಜಿಲ್ಲೆಯಾದ್ಯಂತ ಈ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
‘ಒಂದು ಮೊಟ್ಟೆಯ ಕಥೆ’ ಚಿತ್ರ ತಂಡದ ನೇತೃತ್ವದಲ್ಲಿ, ವೈಭವ್ ಫಿಕ್ಸ್ ಅಡಿಯಲ್ಲಿ ಮ್ಯಾಂಗೋ ಪಿಕಲ್ ಬ್ಯಾನರ್ ನಲ್ಲಿ ತಯಾರಾದ ರಾಜ್ ಸೌಂಡ್ಸ್ ಆಂಡ್ ಲೈಟ್ಸ್ ತುಳು ಸಿನಿಮಾ ಬಿಡುಗಡೆಗೊಂಡ ಎಲ್ಲಾ ಟಾಕೀಸ್, ಮಾಲ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.

ಮೇ 27 ರಂದು ಶುಕ್ರವಾರ ಪುತ್ತೂರಿನ ಅರುಣಾ ಚಿತ್ರಮಂದಿರದಲ್ಲಿ ಬೆಳಿಗ್ಗೆ 9 ಗಂಟೆಗೆ ಸಿನಿಮಾ ಬಿಡುಗಡೆಯ ಕಾರ್ಯಕ್ರಮ ನಡೆಯಲಿದೆ ಎಂದು ಸಿನಿಮಾದ ನಾಯಕ ನಟ ವಿನೀತ್ ಕುಮಾರ್ ಹೇಳಿದರು.