ಸುಳ್ಯ: ವ್ಯಕಿಯೋರ್ವ ಜಯನಗರ ಶ್ರೀ ಆದಿ ಮೊಗೇರ್ಕಳ ದೈವಸ್ಥಾನದ ಹುಂಡಿಯನ್ನು ದೈವಸ್ಥಾನದ ಅಡುಗೆ ಕೋಣೆಗೆ ಕೊಂಡೊಯ್ದು ಹುಂಡಿಯನ್ನು ಒಡೆಯುತ್ತಿದ್ದ ಸಂದರ್ಭದಲ್ಲಿ ಸಾರ್ವಜನಿಕರು ಆತನನ್ನು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಜಯನಗರ ಆಶ್ರಯ ಕಾಲೋನಿ ನಿವಾಸಿ ಜೀವನ್ ಎನ್ನಲಾಗಿದೆ.

ಸ್ಥಳೀಯ ನಿವಾಸಿಗಳು ಪೂಜೆ ಸಲ್ಲಿಸಲು ದೈವಸ್ಥಾನಕ್ಕೆ ಹೋಗಿದ್ದ ವೇಳೆ ಅಡುಗೆ ಕೋಣೆಯಿಂದ ಶಬ್ದ ಕೇಳಿ ಬಂದಿದ್ದು, ಈ ವೇಳೆ ಸ್ಥಳೀಯರು ಕೋಣೆಯ ಒಳಪ್ರವೇಶಿಸಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ದೈವಸ್ಥಾನದ ಹುಂಡಿಯನ್ನು ಒಡೆಯುವ ಪ್ರಯತ್ನದಲ್ಲಿದ್ದ ಎನ್ನಲಾಗಿದೆ.
ಈತನನ್ನು ನೋಡಿದ ಸ್ಥಳೀಯರು ದೈವಸ್ಥಾನಕ್ಕೆ ಸಂಬಂಧಪಟ್ಟವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸ್ಥಳೀಯರು ಸ್ಥಳಕ್ಕೆ ಬಂದು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಸುಳ್ಯ ಠಾಣೆಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.