ಪುತ್ತೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿ ಗ್ಯಾಸ್ ಸಿಲಿಂಡರ್ ಗೆ ತಗುಲಿ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ನರಿಮೊಗರಿನಲ್ಲಿ ನಡೆದಿದೆ.

ನರಿಮೊಗರಿನ ಬಾಲಕೃಷ್ಣ ಮಡಿವಾಳ ಎಂಬವರಿಗೆ ಸೇರಿದ ಮಹಾಲಿಂಗೇಶ್ವರ ಲಾಂಡ್ರಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿ ಗ್ಯಾಸ್ ಗೆ ತಗುಲಿ ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ ಎಂದು ವರದಿಯಾಗಿದೆ.

ಘಟನೆಯಿಂದಾಗಿ ಅಪಾರ ನಷ್ಟ ಸಂಭವಿಸಿದ್ದು, ಅಂಗಡಿ ಮಾಲೀಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.




