ಬೆಟ್ಟಂಪಾಡಿ: ಶ್ರೀ ಮಹಾಲಿಂಗೇಶ್ವರ ದೇವಾಲಯದ ಪ್ರಧಾನ ಅರ್ಚಕರಾಗಿದ್ದ ಶಂಭುಶರ್ಮ(66) ಕಾನುಮೂಲೆ ರವರು ಮೇ.26 ರಂದು ನಿಧನರಾದರು.

ಶಂಭುಶರ್ಮ ರವರು ಸಹೋದರನ ಮನೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಮಧ್ಯಾಹ್ನ ಏಕಾಏಕಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಸಹೋದರರನ್ನು ಅಗಲಿದ್ದಾರೆ.