ಪುತ್ತೂರು: ಹೆಡಗೇವಾರ್ ರವರ ಭಾಷಣವನ್ನು ಪಠ್ಯ ಪುಸ್ತಕದಿಂದ ಹಿಂಪಡೆಯುವಂತೆ ಆಗ್ರಹಿಸಿ ಸಿಎಫ್‌ಐ ಮೇ .26 ರಂದು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ್ ಬಲರಾಮ್ ಹೆಡಗೇವಾರ್ ರವರ ಭಾಷಣವನ್ನು 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಹತ್ತನೇ ತರಗತಿ ಕನ್ನಡ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಿದ್ದು,ಇದು ಶಿಕ್ಷಣದ ಕೇಸರೀಕರಣದ ಮುಂದುವರೆದ ಭಾಗವಾಗಿದ್ದು ಇದನ್ನು ಶೀಘ್ರ ಹಿಂಪಡೆಯಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿ ಮುಖಂಡ ರಿಯಾಜ್ ಅಂಕತ್ತಡ್ಕ ಆಗ್ರಹಿಸಿದರು.

ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ತನ್ನದೇ ಆದ ಹಿಂದೂ ರಾಷ್ಟ್ರದ ಕಲ್ಪನೆಯೊಂದಿಗೆ ಜನರ ದಾರಿ ತಪ್ಪಿಸಿದ ಹೆಡ್ಗೆವಾರ್ ಭಾಷಣವನ್ನು ಪಠ್ಯಕ್ರಮದಲ್ಲಿ ಸೇರಿಸಿರುವುದು ಶಿಕ್ಷಣದಲ್ಲಿ ಹಿಂದುತ್ವ ಸಿದ್ದಾಂತದ ಹೇರಿಕೆಯೆಂಬುದು ಸ್ಪಷ್ಟವಾಗಿದೆ, ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತೀವ್ರವಾಗಿ ವಿರೋಧಿಸುತ್ತಿದೆ ಹಾಗೂ ಈ ಹೆಡ್ಗೆವಾರ್ ಭಾಷಣವನ್ನು ಶೀಘ್ರ ಪಠ್ಯಕ್ರಮದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷ ಆರಿಫ್ ಬೆಟ್ಟಂಪಾಡಿ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ಕಾರ್ಯದರ್ಶಿ ಫಾರೂಕ್ ಕಟ್ಟತ್ತಾರು, ಜಿಲ್ಲಾ ಸಮಿತಿ ಸದಸ್ಯರಾದ ರಾಯಿರ ಕಲ್ಲರ್ಪೆ, ಮುಸ್ತಾಫ ಕೊಡಿಪ್ಪಾಡಿ, ಶಬೀರ್ ಕಲ್ಲರ್ಪೆ ಸೇರಿದಂತೆ ಹಲವಾರು ಮಂದಿ ಸಿಎಫ್‌ಐ ಸದಸ್ಯರು ಉಪಸ್ಥಿತರಿದ್ದರು.
