ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆಯು ಮೇ. 28 ರಂದು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ.
ಇದೇ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ್ ಅಮೈ ರವರಿಗೆ ಸಂಘದ ವತಿಯಿಂದ ‘ಸ್ವರ್ಣ ಸಾಧನಾ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ‘ಸ್ವರ್ಣ ಸಾಧನಾ’ ಪ್ರಶಸ್ತಿ ಸ್ಥಾಪಿತಗೊಂಡಿದ್ದು, ಪ್ರತಿ ವರ್ಷ ವಾರ್ಷಿಕ ಮಹಾಸಭೆಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಸಾಹಿತ್ಯ, ಶಿಕ್ಷಣ, ಸಾಂಸ್ಕೃತಿಕ, ಸಮಾಜಸೇವೆ, ಕೃಷಿ ಕ್ಷೇತ್ರಗಳನ್ನು ಆಯ್ಕೆ ಮಾಡಿ ಪರ್ಯಾಯವಾಗಿ ಪ್ರಶಸ್ತಿ ನೀಡಲಾಗುವುದು.
ಈ ವರ್ಷ ಕೃಷಿ ನೀರಾವರಿ ಕ್ಷೇತ್ರವನ್ನು ಆಯ್ಕೆ ಮಾಡಿ ಪದ್ಮಶ್ರೀ ಮಹಾಲಿಂಗ ನಾಯ್ಕ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರಶಸ್ತಿಯು 15 ಸಾವಿರ ರೂ. ನಗದು, ಸ್ಮರಣಿಕೆ, ಶಾಲು, ಫಲಕಗಳನ್ನು ಒಳಗೊಂಡಿರುತ್ತದೆ ಎಂದು ಐತ್ತಪ್ಪ ನಾಯ್ಕ ರವರು ತಿಳಿಸಿದ್ದಾರೆ.


























