ವಿಟ್ಲ: ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಟೋ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿನಲ್ಲಿ ನಡೆದಿದೆ.

ಮಾಣಿಯಿಂದ ಸೂರಿಕುಮೇರು ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಕಲ್ಲಡ್ಕ ಕಡೆಯಿಂದ ಬರುತ್ತಿದ್ದ ರಿಟ್ಜ್ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ.
ಘಟನೆಯಿಂದಾಗಿ ರಿಕ್ಷಾ ಚಾಲಕ ಸೂರಿಕುಮೇರು ಮಸೀದಿ ಅಧ್ಯಕ್ಷ ಮೂಸ ಕರೀಂ ಮಾಣಿ ರವರಿಗೆ ಗಾಯವಾಗಿದ್ದು, ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ.

























