ಮಂಗಳೂರು: ನಗರ ಹೊರವಲಯದ ಕಣ್ಣೂರು ಮೈದಾನದಲ್ಲಿ ಎಸ್‌ಡಿಪಿಐ ಏರ್ಪಡಿಸಿದ ‘ಬೃಹತ್ ಜನಾಧಿಕಾರ ಸಮಾವೇಶ’ದಲ್ಲಿ ಪಾಲ್ಗೊಂಡಿದ್ದ ಎಸ್.ಡಿ.ಪಿ.ಐ. ಕಾರ್ಯಕರ್ತರಿಂದ ಪೊಲೀಸರಿಗೆ ನಿಂದನೆ ವಿಡಿಯೋ ವೈರಲ್ ಹಿನ್ನೆಲೆ ನಿಂದಿಸಿದ 9 ಎಸ್.ಡಿ. ಪಿ. ಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಒಂಭತ್ತು ಜನರನ್ನು ಪೊಲೀಸರು ಬಂಧಿಸಿದ್ದು, ನೌಶಾದ್, ಹೈದರಾಲಿ ಬಂಧಿತ ಮುಖ್ಯ ಆರೋಪಿಗಳಾಗಿದ್ದು, ಆರೋಪಿಗಳಿಗೆ ಆಶ್ರಯ ನೀಡಿದ ಇತರರನ್ನು ಕೂಡ ಬಂಧಿಸಿದ್ದಾರೆ.
ಮೇ.27 ರಂದು ಕಣ್ಣೂರಿನಲ್ಲಿ ನಡೆದಿದ್ದ ಎಸ್.ಡಿ.ಪಿ.ಐ ಸಮಾವೇಶಕ್ಕೆ ಬೈಕ್ ಮತ್ತು ಕಾರ್ ನಲ್ಲಿ ಬಂದ ಸವಾರ, ಸಹ ಸವಾರದಿಂದ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ವಿಡಿಯೋ ವೈರಲ್ ಆಗಿತ್ತು.

ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಂಗನ ಗೌಡ ಮೈಮೇಲೆ ಹಾಯಿಸುವಂತೆ ಬೈಕ್ ಸವಾರಿ ಕೂಡ ಮಾಡಿದ್ದರು. ಕರ್ತವ್ಯ ನಿರತ ಪೊಲೀಸರಿಗೆ ಅಡೆತಡೆಯುಂಟು ಮಾಡಿ ನಿಂದಿಸಿದ್ದರು ಎಂದು ಘಟನೆ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.
ಒಂದು ಬೈಕ್ ಹಾಗೂ ಕಾರಿನಲ್ಲಿ 11 ಜನರ ಗುಂಪು ಈ ಕೃತ್ಯದಲ್ಲಿ ಭಾಗವಹಿಸಿತ್ತು ಎಂದು ಪೊಲೀಸರು ತಿಳಿಸಿದ್ದರು. ಪಡೀಲ್ ನಿಂದ ಕಾರ್ಯಕ್ರಮ ಸ್ಥಳಕ್ಕೆ ಅಜಾಗರೂಕತೆ,ಅತಿವೇಗ ಚಾಲನೆ ಮಾಡಿದ್ದಾರೆ, ಚೆಕ್ ಪೋಸ್ಟ್ ಸಿಬ್ಬಂದಿಗಳ ತಪಾಸಣೆಗೂ ಒಳಪಡದೇ ಹೋಗಿದ್ದಾರೆ. ಪೊಲೀಸ್ ಇಲಾಖೆ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಘೋಷಣೆ ಕೂಡ ಹಾಕಿದ್ದು, ವಿಡಿಯೋ ವೈರಲ್ ಆಗಿತ್ತು. ವಿಡಿಯೋ ಆದರಿಸಿ ಮೇ.28 ರಂದು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಬೆಂಗಳೂರು ಮತ್ತು ಮೈಸೂರಿನಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ನೌಶಾದ್ ಬೆಂಗಳೂರಿನಲ್ಲಿ ಬೇಕರಿಯಲ್ಲಿ ಕೆಲಸ ಮಾಡ್ತಿದ್ದ, ಹೈದರಾಲಿ ಮೈಸೂರಿನಲ್ಲಿ ಜ್ಯೂಸ್ ಸೆಂಟರ್ ನಲ್ಲಿ ಕೆಲಸ ಮಾಡ್ತಿದ್ದ ಎಂದು ಕಮಿಷನರ್ ತಿಳಿಸಿದ್ದಾರೆ.
ನೌಶಾದ್ ಬಂಧನಕ್ಕೆ ತೆರಳಿದಾಗ ತಪ್ಪಿಸಲು ಯತ್ನಿಸಿದ್ದಾನೆ ,ಪಿ.ಎಸ್.ಐ ತಳ್ಳಿ ಸಿಬ್ಬಂದಿಗೆ ಗಾಯವಾಗಿದೆ. ಈ ಕುರಿತು ಬೆಂಗಳೂರು ಮಡಿವಾಳ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ ಎಂದಿದ್ದಾರೆ.

























