ವಿಟ್ಲ: ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ಹಾಗೂ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಲವ್ ಜಿಹಾದ್, ಮತಾಂತರ, ಗೋಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಹಿಂದೂ ನಾಯಕರ ಅವಹೇಳನದ ವಿರುದ್ಧ ಜಾಗೃತಿ ಮೂಡಿಸಲು ‘ಬೃಹತ್ ಹಿಂದೂ ಜಾಗೃತಿ ಸಭೆ’ ಜೂ.6 ರಂದು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಬಳಿಯಲ್ಲಿ ನಡೆಯಲಿದೆ.
ಪುತ್ತೂರು ರಸ್ತೆಯ ಜೈನ ಬಸದಿ, ಮಂಗಳೂರು ರಸ್ತೆಯ ಬೊಬ್ಬೆಕೇರಿ ಪೆಟ್ರೋಲ್ ಪಂಪ್ ಹಾಗೂ ಸಾಲೆತ್ತೂರು ರಸ್ತೆಯ ಐ.ಬಿ ಯ ಬಳಿಯಿಂದ ಏಕಕಾಲದಲ್ಲಿ ಕಾಲ್ನಡಿಗೆ ಜಾಥ ಹೊರಟು ವಿಟ್ಲ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಬಳಿ ಹಿಂದೂ ಜಾಗೃತಿ ಸಭೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























