ಪುತ್ತೂರು: ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಕರೀಯ ಎಮ್.ಎ ರವರನ್ನು ಪುತ್ತೂರು ನಗರ ಪೊಲೀಸ್ ಠಾಣೆಗೆ ಮತ್ತು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ರವರನ್ನು ಸಂಚಾರ ಪೊಲೀಸ್ ಠಾಣೆಗೆ ವರ್ಗಾಯಿಸಿ ಆದೇಶಿಸಲಾಗಿದೆ.

ಪರಮೇಶ್ವರ ರವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ವಾರಂಟ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಸ್ಕರೀಯ ರವರು ಪುತ್ತೂರು ನಗರ ಪೊಲೀಸ್ ಠಾಣೆಯಿಂದ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಈ ನಡುವೆ ಅವರು ಹಲವು ಸಮಯ ಡಿವೈಎಸ್ಪಿ ಸ್ಕಾಡ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಮತ್ತೆ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

























