ಮಂಗಳೂರು: “ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕೆಲವು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಸ್ನಾತಕ್ಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದ್ದು, ವಿಶ್ವವಿದ್ಯಾನಿಲಯ ಕಂಟೋನ್ಮೆಂಟ್ ಝೋನ್ ಮಾಡಲಾಗಿದೆ” ಎಂದು ವಿಶ್ವವಿದ್ಯಾನಿಲಯ ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು, “ಕೊರೊನಾ ವೈರಸ್ ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ವಿಶ್ವವಿದ್ಯಾನಿಲಯಮ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ, ಸಂಶೋಧನಾ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಮಾರ್ಚ್ 25 ರಿಂದ ಮಾರ್ಚ್ 29 ರವರೆಗೆ ರದ್ದುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.
“ವಿಶ್ವವಿದ್ಯಾಲಯವನ್ನು ಕಂಟೈನ್‌ಮೆಂಟ್ ಝೋನ್ ಆಗಿ ಘೋಷಿಸಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ವಸತಿ ನಿಲಯದಲ್ಲೇ ಇರಲು ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳ ಆರ್‌ಟಿಪಿಸಿಆರ್ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸುತ್ತಿದೆ” ಎಂದಿದ್ದಾರೆ.