ಮುಂಬೈ: ಮಹಾರಾಷ್ಟ್ರಾದ ಬಂಡುಪ್ ಪ್ರದೇಶದಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ತಡರಾತ್ರಿ 12.30ವೇಳೆಗೆ ಡ್ರೀಮ್ಸ್ ಮಾಲ್ ನಲ್ಲಿರುವ ಕೋವಿಡ್ ಕೇರ್ ಸೆಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ 23 ಅಗ್ನಿಶಾಮಕ ವಾಹನದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆಸ್ಪತ್ರೆಯಲ್ಲಿ ಲೆವೆಲ್ 3,4ರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 76 ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿಗಳು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ ಎಂದು ಡಿಸಿಪಿ ಪ್ರಶಾಂತ್ ಕಡಾಮ್ ತಿಳಿಸಿದ್ದಾರೆ. ಬೆಂಕಿ ಅನಾಹುತಕ್ಕೆ ಯಾವುದೇ ಕಾರಣ ತಿಳಿದುಬಂದಿಲ್ಲ. ತನಿಖೆಯ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.