ಸುಳ್ಯ: ವೆಂಕಟರಮಣ ಸೊಸೈಟಿಯ ಬಳಿ ಜೂ.5 ರಂದು ರಾತ್ರಿ ಯುವಕನೊಬ್ಬನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದ್ದು, ಈ ಬಗ್ಗೆ ಯುವಕ ನೀಡಿದ ದೂರಿನ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ ಜಯನಗರ ನಿವಾಸಿ ಮಹಮ್ಮದ್ ಸಾಯಿ(39) ಗುಂಡಿನ ದಾಳಿಗೆ ಒಳಗಾದ ಯುವಕ.

ಜೂ.5 ರಂದು ಸುಳ್ಯದ ಮೊಗರ್ಪಣೆ ಯಲ್ಲಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬಳಿ ಜಯನಗರದ ಶಾಯಿ ತನ್ನ ಕ್ರೆಟ್ಟಾ ಕಾರನ್ನು ನಿಲ್ಲಿಸಿ ತನ್ನ ತಂಗಿಯ ಮನೆಗೆ ಹೋಗಿದ್ದರು. ಅಲ್ಲಿಂದ ಹಿಂತಿರುಗಿ ಅವರು ತನ್ನ ಕಾರನ್ನು ಏರುತ್ತಿರುವ ಸಂದರ್ಭ ಹಿಂದಿನಿಂದ ಸ್ಕಾರ್ಪಿಯೋ ವಾಹನದಲ್ಲಿ ಬಂದ ಅಪರಿಚಿತ ನಾಲ್ವರು ಗುಂಡು ಹಾರಿಸಿದ್ದಾರೆ.

ಗುಂಡು ಅದೃಷ್ಟವಶಾತ್ ಶಾಯಿಗೆ ತಾಗದೆ ಅವರ ಕಾರಿಗೆ ತಾಗಿ ಕಾರು ಜಖಂಗೊಂಡಿದೆ. ಗುಂಡಿನ ಚಿಲ್ಲ್ ರಟ್ಟಿದ ಪರಿಣಾಮ ಬೆನ್ನಿನ ಭಾಗಕ್ಕೆ ಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಠಾಣೆಯಲ್ಲಿ ಅ,ಕ್ರ 62/2022 ಕಲಂ: 307 34 ಐಪಿಸಿ ಮತ್ತು ಕಲಂ 25 27 ಆರ್ಮ್ಸ್ ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

























