ಪುಂಜಾಲಕಟ್ಟೆ: ಹಾಡಹಗಲೇ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ವಾಹನವನ್ನು ಹಾಗೂ ಆರೋಪಿಯನ್ನು ಪುಂಜಾಲಕಟ್ಟೆ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ಉಳಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬಳಿ ನಡೆದಿದೆ.
ಬಂಧಿತ ಆರೋಪಿಯನ್ನು ಉಳಿ ಗ್ರಾಮದ ಕಕ್ಯೆಪದವು ನಿವಾಸಿ ಮಹಮ್ಮದ್ ರಫೀಕ್(34) ಎಂದು ಗುರುತಿಸಲಾಗಿದೆ.
ಕಕ್ಯೆಪದವು ಸಮೀಪದ ಉಳಿ ಎಂಬಲ್ಲಿ ವಾಹನವೊಂದರಲ್ಲಿ ಅಕ್ರಮ ಗೋ ಸಾಗಾಟ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹನವನ್ನು ಪರಿಶೀಲಿಸಿದಾಗ ವಾಹನದಲ್ಲಿ ದನವನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು, ಈ ಬಗ್ಗೆ ಆರೋಪಿಯಲ್ಲಿ ಯಾವುದೇ ದಾಖಲೆಗಳು ಇಲ್ಲದ ಕಾರಣ ಆರೋಪಿಯನ್ನು ವಶಕ್ಕೆ ಪಡೆದು ವಾಹನ ಹಾಗೂ ಕಪ್ಪು ಮತ್ತು ಕಂದು ಬಣ್ಣದ ದನವನ್ನು ಸ್ವಾದೀನಪಡಿಸಿಕೊಂಡಿದ್ದಾರೆ.
ಸ್ವಾದಿಪಡಿಸಿಕೊಂಡ ದನದ ಅಂದಾಜು ಮೌಲ್ಯ 3000 ರೂ. ಮತ್ತು ವಾಹನದ ಅಂದಾಜು ಮೌಲ್ಯ 100000 ರೂ. ಆಗಬಹುದಾಗಿದೆ. ಈ ಬಗ್ಗೆ ಠಾಣೆಯಲ್ಲಿ ಸಿಆರ್ ನಂ. 34/2022 ಕಲಂ: 5,7,12 ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 & ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಮತ್ತು ಜಾನುವಾರು ಪರಿರಕ್ಷಣೆ ಅಧಿನಿಯಮ ಕಾಯ್ದೆ 1960 & ಕಲಂ: 66 ಐ ಎಂ ವಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


























