ಬೆಂಗಳೂರು: ಶಂಕಿತ ಉಗ್ರ ತಾಲಿಬ್ ಹುಸೇನ್ನನ್ನು ಪೊಲೀಸರು ಬಂಧಿಸುವಲ್ಲಿ ಯಶ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಉಗ್ರ ತಾಲಿಬ್ ಹುಸೇನ್ (38)ನನ್ನು ಜಮ್ಮು ಮತ್ತ ಕಾಶ್ಮೀರದ ಪೊಲೀಸರು ಬೆಂಗಳೂರಿನ ಶ್ರೀರಾಂಪುರದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ತಾಲಿಕ್ ಎಂದು ಹೆಸರು ಬದಲಿಸಿ ಓಡಾಡ್ತಿದ್ದ ಉಗ್ರ ತಾಲಿಬ್, ಬಿಎನ್ಎಲ್ ಏರ್ ಸರ್ವಿಸ್ನಲ್ಲಿ ಕೆಲಸ ಮಾಡುತ್ತಿದ್ದ. ಕಾಶ್ಮೀರದಿಂದ ಬೆಂಗಳೂರಿಗೆ ಬರುವ ವೇಳೆಯಲ್ಲಿ ಪತ್ನಿಯನ್ನೂ ಕರೆತಂದಿದ್ದಾನೆ. ಅದರಂತೆ ಪತ್ನಿ ಸಲೀಮಾ (35) ಮತ್ತು ಆಸೀಫ್(6),ದಾನೀಫರ್ (10),ಆಶಿಯಾ(2) ಎಂಬ ಮೂವರು ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ನೆಲೆಸಿದ್ದನು.
ಉಗ್ರನಿಗೆ ಆಶ್ರಯ ನೀಡಿದ ಮಸೀದಿ ಮುಖ್ಯಸ್ಥ
ಉಗ್ರ ತಾಲಿಬ್ ಹುಸೇನ್ಗೆ ಓಕಳಿಪುರಂ ಮಸೀದಿ ಮುಖ್ಯಸ್ಥ ಅನ್ವರ್ ಪಾಷಾ ಆಶ್ರಯ ನೀಡಿದ್ದಾನೆ. ಅದರಂತೆ ಮಸೀದಿ ಪಕ್ಕದಲ್ಲೇ ರೂಮ್ ಮಾಡಿ ನೆಲೆಸಿದ್ದನು. ಅಷ್ಟೇ ಅಲ್ಲದೆ ಅಲ್ಲಿನ ಮಸೀದಿಯಲ್ಲಿ ಪಾಠ ಪ್ರವಚನ ಮಾಡುತ್ತಿದ್ದ ಶಂಕೆಯೂ ವ್ಯಕ್ತವಾಗಿದೆ. ಈತನಿಗೆ ಓಕಳಿಪುರಂ ನಿವಾಸಿಯಾದ ಮೌಸೀನ್ ಎಂಬಾತ ಸಿಮ್ ಕಾರ್ಡ್ ಕೊಡಿಸಿದ್ದಾನೆ. ಸದ್ಯ ಉಗ್ರ ತಾಲಿಬ್ನನ್ನು ಪೊಲೀಸರು ಬಂಧಿಸಿ ಕಾಶ್ಮೀರಕ್ಕೆ ಕರೆದುಕೊಂಡು ಹೋಗಿದ್ದಾರೆ.
ಶಂಕಿತ ಉಗ್ರರ ಮೇಲೆ ಹದ್ದಿನ ಕಣ್ಣು
ಬೆಂಗಳೂರಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂತಹ ಶಂಕಿತರ ಮೇಲೆ ಪೊಲೀಸ್ ಇಲಾಖೆ ನಿರಂತರ ಕಣ್ಣಿಟ್ಟಿದೆ. ಜಮ್ಮು-ಕಾಶ್ಮೀರ ಪೊಲೀಸರು ಕೂಡ ಹದ್ದಿನ ಕಣ್ಣಿಟ್ಟಿದ್ದಾರೆ. ಹಿಂದೆಯೂ ಭಟ್ಕಳ, ಶಿರಸಿಯಲ್ಲಿ ಶಂಕಿತರನ್ನು ಬಂಧಿಸಲಾಗಿತ್ತು. ಕಾಶ್ಮೀರ ಪೊಲೀಸರಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡುತ್ತಿದ್ದಾರೆ ಎಂದರು.
ಉಗ್ರನ ಬಂಧನದ ಬಗ್ಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಜಮ್ಮು-ಕಾಶ್ಮೀರ ಪೊಲೀಸರು ಉಗ್ರನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ನಮ್ಮ ಜೊತೆ ಜಮ್ಮು ಪೊಲೀಸರು ಸಂಪರ್ಕದಲ್ಲಿದ್ದಾರೆ. ಆದರೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ವಿನಿಮಯವಾಗಿಲ್ಲ. ಮುಂದಿನ ಹಂತದಲ್ಲಿ ನಮ್ಮ ಪೊಲೀಸರು ತನಿಖೆ ಮಾಡಲಿದ್ದಾರೆ ಎಂದಿದ್ದಾರೆ.