ಹಾವೇರಿ: ಕಾಲೇಜಿನಲ್ಲಿ ಇಂಗ್ಲೀಷ್ ಪಾಠ ಮಾಡುತ್ತಿದ್ದ ಪ್ರಾಧ್ಯಾಪಕ ಹೆಚ್ಚುವರಿಯಾಗಿ ಟ್ಯೂಷನ್ ಕೊಡುತ್ತೇನೆಂದು ವಿದ್ಯಾರ್ಥಿನಿಯನ್ನು ಕರೆಸಿ ಲೈಂಗಿಕ ದೌರ್ಜನ್ಯ ಆರೋಪ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ. ಈತನ ಲೈಂಗಿಕ ದೌರ್ಜನ್ಯದಿಂದ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿ ಆಗಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಕಲಕೋಟಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಈತ ಕಾಲೇಜಿನಲ್ಲಿ ಇಂಗ್ಲೀಷ್ ಪಾಠ ಮಾಡುತ್ತಿದ್ದ.
ಕಾಲೇಜು ಮುಗಿದ ಮೇಲೆ ಬಿ.ಕಾಂ ಅಂತಿಮ ವರ್ಷದ 22 ವರ್ಷದ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ ಕಳೆದೊಂದು ವರ್ಷದಿಂದ ಟ್ಯೂಷನ್ಗಾಗಿ ಕರೆಸಿಕೊಳ್ಳುತ್ತಿದ್ದ.
ಒಂದೂವರೆ ವರ್ಷಗಳಿಂದ ವಿದ್ಯಾರ್ಥಿನಿ ಮೇಲೆ ಏಳೆಂಟು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪ ಕೇಳಿ ಬಂದಿದೆ. ಅಲ್ಲದೆ ಲೈಂಗಿನ ದೌರ್ಜನ್ಯ ಎಸಗಿದ್ದಲ್ಲದೆ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಆಕೆ ದೂರಿಕೊಂಡಿದ್ದಾಳೆ.
ಈ ಕೃತ್ಯದಿಂದ ವಿದ್ಯಾರ್ಥಿನಿ ಇದೀಗ ಮೂರು ತಿಂಗಳ ಗರ್ಭಿಣಿ ಆಗಿದ್ದಾರೆ. ವಿದ್ಯಾರ್ಥಿನಿಯನ್ನು ಹಾವೇರಿ ನಗರದ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ.
ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಕಲಕೋಟಿ ವಿರುದ್ಧ ವಿದ್ಯಾರ್ಥಿನಿಯಿಂದ ಸವಣೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 376(2)(N) ಮತ್ತು 506 ಅಡಿ ದೂರು ದಾಖಲಾಗಿದೆ.