ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಸರಗೋಡು ವಿಧಾನಸಭಾ ಕ್ಷೇತ್ರದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಮತ ಪ್ರಚಾರ ಕಾರ್ಯದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಬೆಳ್ಳೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಧರನ್, ಬಿಜೆಪಿ ಪ್ರಮುಖರಾದ ಸುರೇಶ್ ಆಳ್ವ, ವಿಶ್ವನಾಥ ಕುಲಾಲ್, ಆಶೀರ್ವಾದ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.