ಪುತ್ತೂರು: ಕಾಂಗ್ರೆಸ್ ಪಕ್ಷದ ಮತ್ತೋರ್ವ ಮುಖಂಡ ಬಿಜೆಪಿ ಪಕ್ಷಕ್ಕೆ ಶೀಘ್ರದಲ್ಲಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಅಶೋಕ್ ಕುಮಾರ್ ಸಂಪ್ಯ ರವರು ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಅಶೋಕ್ ರವರು ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಆರ್ಯಾಪು ಪಂಚಾಯತ್ ಸದಸ್ಯರಾಗಿ,ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷರಾಗಿ, ಆರ್ಯಾಪು ವಲಯ ಕಾಂಗ್ರೆಸ್ ನ ಅಧ್ಯಕ್ಷರಾಗಿಯೂ ಅಷ್ಟೇ ಅಲ್ಲದೇ NSUI ಪುತ್ತೂರು ಇದರ ಅಧ್ಯಕ್ಷರು ಮತ್ತು ಕೆಡಿಪಿಯ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದರು ಹಾಗೂ ಪಕ್ಷ ಬೆಳವಣಿಗೆಯಲ್ಲಿ ಸಕ್ರಿಯವಾಗಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.
ಕಾಂಗ್ರೆಸ್ ನಲ್ಲಿ ಅನೇಕ ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದ ಅತ್ಯಂತ ಪ್ರಭಾವಶಾಲಿ ಮುಖಂಡ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು ಮುಂದಿನ ದಿನಗಳಲ್ಲಿ ಅಧಿಕೃತ ವಾಗಿ ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

























