ಬಂಟ್ವಾಳ: ವಿಹೆಚ್‌ಪಿ ಹಾಗೂ ಬಜರಂಗದಳ ಆಯೋಜಿದ್ದ ಕಾರ್ಯಕ್ರಮದಲ್ಲಿ ಧರ್ಮ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಹಾಗೂ ಸಂಘಟಕರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಬಳಬೆಟ್ಟು ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಜೂ.6 ರಂದು ಬಂಟ್ವಾಳ ತಾಲೂಕು ವಿಟ್ಲದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ರಾಧಾಕೃಷ್ಣ ಅಡ್ಯಂತಾಯ ರವರು ಸಾಮರಸ್ಯಕ್ಕೆ ಧಕ್ಕೆ ಉಂಟಾಗುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಈ ಹಿನ್ನೆಲೆ ಅವರ ವಿರುದ್ಧ ಹಾಗೂ ಕಾರ್ಯಕ್ರಮವನ್ನು ಸಂಘಟಿಸಿದ ಸಂಘಟಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 90/2022 ಕಲಂ: 505(2) ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.




























