ನೆಲ್ಯಾಡಿ: ಬಸ್ ಗಳ ಓವರ್ ಟೇಕ್ ನಿಂದಾಗಿ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಸಿಮೆಂಟ್ ಸಾಗಾಟದ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ನೆಲ್ಯಾಡಿ ಸಮೀಪದ ಪೆರಿಯಶಾಂತಿಯಲ್ಲಿ ನಡೆದಿದೆ.

ಹೆದ್ದಾರಿ ಮೂಲಕ ದೊಡ್ಡಬಳ್ಳಾಪುರದಿಂದ ಕಾರ್ಕಳಕ್ಕೆ ಸಿಮೆಂಟ್ ಕೊಂಡೊಯ್ಯುತ್ತಿದ್ದ ಲಾರಿ ಇದಾಗಿದ್ದು, ಬಸ್ ಗಳೆರಡು ಓವರ್ ಟೇಕ್ ಮಾಡಿಕೊಂಡು ಬಂದಿದ್ದು, ಡಿಕ್ಕಿಯಾಗುವುದನ್ನು ತಪ್ಪಿಸಲು ರಸ್ತೆ ಬದಿಗೆ ತಿರುಗಿಸಿದ್ದು, ನಿಯಂತ್ರಣ ಕಳೆದುಕೊಂಡು ಮಂಗಳೂರು-ಬೆಂಗಳೂರು ಹೆದ್ದಾರಿ ಬದಿ ಕಂದಕಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ.
ಅಪಘಾತದಿಂದಾಗಿ ಲಾರಿಯಲ್ಲಿದ್ದ ಚಾಲಕ ಮತ್ತು ಸಹಾಯಕ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡ ಚಾಲಕ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
























