ಪುತ್ತೂರು: ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.11 ರಂದು ಪುತ್ತೂರಿನ ನೆಕ್ಕರೆ ಎಂಬಲ್ಲಿ ನಡೆದಿದೆ.
ಮೃತರನ್ನು ಥೋಮಸ್ ದಾಲ್ಮೆಡ (50) ಎಂದು ಗುರುತಿಸಲಾಗಿದೆ.
ಅವಿವಾಹಿತರಾಗಿದ್ದ ಥೋಮಸ್ ರವರು ತಾಯಿಯ ಜೊತೆ ವಾಸವಾಗಿದ್ದು, ಕೂಲಿ ಕೆಲಸ ನಿರ್ವಹಿಸುತ್ತಿದ್ದರು. ಜೂ. 11ರಂದು ಮನೆಯಲ್ಲೇ ಇದ್ದು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ಥೋಮಸ್ ಅವರು ಅಸ್ವಸ್ಥಗೊಂಡು ಬಿದ್ದಿರುವುದನ್ನು ನೋಡಿದ ಮನೆಯವರು ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆದೊಯ್ದರೂ ಆಗಲೇ ಥೋಮಸ್ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

























