ಪುತ್ತೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರ ಎಂಟು ವರ್ಷ ಪೂರೈಸಿದ ಸಂಭ್ರಮಾಚರಣೆಯ ಪ್ರಯುಕ್ತ ಸೇವೆ, ಸುಶಾಸನ, ಬಡವರ ಕಲ್ಯಾಣ ಕಾರ್ಯಕ್ರಮದಡಿ ಪರಿಶಿಷ್ಟ ಪಂಗಡದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವಾರ್ಪಣೆ ಹಾಗೂ ಅಭಿನಂದನಾ ಮತ್ತು ಕೇಂದ್ರ, ರಾಜ್ಯ ಸರಕಾರದ ಯೋಜನೆಗಳ ಮಾಹಿತಿ ಕಾರ್ಯಕ್ರಮವು ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಪರಿಶಿಷ್ಟ ಪಂಗಡದ 120ಸಾಧಕರಿಗೆ ಸನ್ಮಾನವನ್ನು ನೆರವೇರಿಸಿದರು.




























