ವಿಟ್ಲ: ಮೂಲಕ ಅಕ್ರಮವಾಗಿ ಆಂಧ್ರಪ್ರದೇಶ, ಬಳ್ಳಾರಿ, ಸಂಡೂರಿಗೆ ಮಣ್ಣು ಸಾಗಿಸುತ್ತಿದ್ದ ಏಳು ಲಾರಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕರಾವಳಿಯಲ್ಲಿ ನಡೆಯುವ ಅವ್ಯಾಹತ ದಂಧೆಯ ಪಾಲಿಗೆ ಮಣ್ಣುಗಾರಿಕೆಯೂ ಸೇರ್ಪಡೆಗೊಂಡಿದೆ. ಮರಳುಗಾರಿಕೆಯ ಜೊತೆಗೆ ಮಣ್ಣು ದಂಧೆಯೂ ಭಾರೀ ಪ್ರಮಾಣದಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿದ್ದು, ಬೆಟ್ಟ- ಗುಡ್ಡಗಳನ್ನು ಅಗೆದು ಮಣ್ಣನ್ನು ಹೊರ ರಾಜ್ಯಗಳಿಗೆ ರವಾನೆ ಮಾಡಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಹಲವೆಡೆ ಇಂತಹ ಮಣ್ಣು ಸಾಗಾಟದ ಪ್ರಕ್ರಿಯೆ ಹೆಚ್ಚಾಗುತ್ತಿದ್ದು, ಆಂಧ್ರಪ್ರದೇಶದಲ್ಲಿ ಇಲ್ಲಿನ ಮಣ್ಣಿಗೆ ಬೇಡಿಕೆ ಇರುವ ಹಿನ್ನಲೆಯಲ್ಲಿ ಮಣ್ಣಿನ ವಹಿವಾಟು ಹೆಚ್ಚಾಗಲಾರಂಭಿಸಿದೆ. ಈ ರೀತಿಯ ಮಣ್ಣಿನ ವ್ಯಾಪಾರ ಸಾರ್ವಜನಿಕಕರ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಕರಣವನ್ನು ಪೊಲೀಸರು ಗಣಿ ಇಲಾಖೆಗೆ ಹಸ್ತಾಂತರ ಮಾಡಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























