ಪುತ್ತೂರು: ಬಪ್ಪಳಿಗೆ-ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರ ಪುತ್ತೂರು ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸಭಾಭವನದಲ್ಲಿ ಮಾ.28ರಂದು ನೂತನ ಪಂಚಾಯತ್ ಸದಸ್ಯರಿಗೆ, ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಜರಗಲಿದೆ.
ಕಾಯಕ್ರಮದ ಸಭಾಧ್ಯಕ್ಷತೆಯನ್ನು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಜಯಂತ್ ನಡುಬೈಲುರವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಸರಕಾರದ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣರವರು ಭಾಗವಹಿಸಲಿದ್ದಾರೆ. ಬಿಲ್ಲವ ಸಂಘದ ಅಧ್ಯಕ್ಷ ಜಯಂತ್ ನಡುಬೈಲು, ಕಾರ್ಯದರ್ಶಿ ಶಶಿಧರ್ ಕಿನ್ನಿಮಜಲು, ಜೊತೆ ಕಾರ್ಯದರ್ಶಿ ಜಯಂತ್ ಕೆಂಗುಡೆಲು, ಉಪಾಧ್ಯಕ್ಷರಾದ ಡಾ.ಸದಾನಂದ ಕುಂದರ್, ವಿನಯ ವಸಂತ್, ಕೋಶಾಧಿಕಾರಿ ನಾಗೇಶ್ ಬಲ್ನಾಡು, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ಕಾರ್ಯನಿರ್ವಹಣಾಧಿಕಾರಿ ಆರ್.ಸಿ ನಾರಾಯಣ, ಸದಸ್ಯರಾದ ಉಮೇಶ್ ಬರಮೇಲು, ಹೊನ್ನಪ್ಪ ಪೂಜಾರಿ ಕೈಂದಾಡಿ, ಜಯಂತ್ ಬಾಯಾರು, ಅರ್ಚಕ ಜಗದೀಶ್ ಶಾಂತಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಕ್ಷಾ ಅಂಚನ್‌ರವರಿಗೆ ಸನ್ಮಾನ…
ಇದೇ ವರ್ಷ ಜ.26ರಂದು ನವದೆಹಲಿಯ ರಾಜಪಥದಲ್ಲಿ ನಡೆದ ಪ್ರತಿಷ್ಠಿತ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಿದ ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜ್‌ನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಆಗಿರುವ ರಕ್ಷಾ ಅಂಚನ್‌ರವರಿಗೆ ಸಾಧಕಿ ನೆಲೆಯಲ್ಲಿ ಈ ಸಂದರ್ಭದಲ್ಲಿ ಸನ್ಮಾನಿಸಲಾಗುತ್ತಿದೆ.