ಸುಬ್ರಹ್ಮಣ್ಯ: ಕೆಲ ತಿಂಗಳುಗಳ ಹಿಂದೆ ರಾಜ್ಯದ ಪ್ರಸಿದ್ದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಪಾರ್ಕಿಂಗ್ ಜಾಗದಿಂದ, ಆಂಜನೇಯ ಗುಡಿಯ ಹಿಂಬಾಗದಿಂದ ಮಲಗಿದ್ದ ದನವನ್ನು ಕಳ್ಳರು ಕದ್ದು ಇನ್ನೋವ ಕಾರಿನಲ್ಲಿ ತುಂಬಿಸಿ ಕದ್ದೊಯ್ಯಲು ಯತ್ನಿಸಿದ ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಉಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಮಾ.24 ರಂದು ರಾತ್ರಿ ಸುಬ್ರಹ್ಮಣ್ಯ ದೇವಾಲಯದ ವಠಾರದ ದೇವಾಲಯದ ಪಾರ್ಕಿಂಗ್ ಜಾಗದಿಂದ ಆಂಜನೇಯ ಗುಡಿಯ ಹಿಂಬಾಗದಿಂದ ಮಲಗಿದ್ದ ದನವನ್ನು ಕಳ್ಳರು ಕದ್ದು ಇನ್ನೋವ ಕಾರಿನಲ್ಲಿ ತುಂಬಿಸಿ ಕದ್ದೊಯ್ಯಲು ಯತ್ನಿಸಿದ್ದು, ಈ ದೃಶ್ಯವು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಈ ಬಗ್ಗೆ ಹಿಂದೂ ಜಾಗರಣ ವೇದಿಕೆ ಸುಬ್ರಹ್ಮಣ್ಯ ಘಟಕ ಆರೋಪಿಗಳನ್ನು ಬಂಧಿಸುವಂತೆ ಠಾಣೆಗೆ ದೂರು ನೀಡಿತ್ತು. ಠಾಣೆಯಲ್ಲಿ ಅಪರಾಧ ಕ್ರಮಾಂಕ: 37/2022 ಕಲಂ :379,511 ಐಪಿಸಿ ರಂತೆ ಪ್ರಕರಣ ದಾಖಲಾಗಿತ್ತು.


























