ಪುತ್ತೂರು: ವಾಯುವ್ಯ ಶಿಕ್ಷಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಪ್ರಕಾಶ್ ಹುಕ್ಕೇರಿ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಬಹುಮತದಿಂದ ಜಯಗಳಿಸಿದ್ದು, ಈ ಹಿನ್ನೆಲೆ ಕಾಂಗ್ರೆಸ್ ವತಿಯಿಂದ ಪುತ್ತೂರಿನಲ್ಲಿ ಸಂಭ್ರಮಾಚರಣೆ ಮಾಡಲಾಯಿತು.

ಹುಕ್ಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ 5 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದರೆ, ದಕ್ಷಿಣ ಪದವೀಧರ ಕ್ಷೇತ್ರದಲ್ಲಿ 12,205 ಮತ ಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ್ ರೈ ರವರು, ಈ ಜಯ ಕಾಂಗ್ರೆಸ್ ನ ಯುಗ ಪುನರ್ ಯುಗದ ಆರಂಭಕ್ಕೆ ಮುನ್ನುಡಿಯಾಗಿದೆ. ಜಾತಿ-ಮತ ಮರೆತು ಎಲ್ಲರೂ ಒಟ್ಟುಗೂಡಿ ಪಕ್ಷವನ್ನು ಸಂಘಟನೆ ಮಾಡಿ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸುವ ಗುರಿಯನ್ನು ಹೊಂದಬೇಕು ಎಂದರು.

























