ಪುತ್ತೂರು: ಪಾರ್ಕಿಂಗ್ ಮಾಡಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಬೊಳುವಾರು ನಲ್ಲಿ ನಡೆದಿದೆ.

ಪುತ್ತೂರು ಕಡೆಯಿಂದ ಬಂದ ಕಾರೊಂದು ಬೊಳ್ವಾರಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದು, ಈ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ.

ಅಪಘಾತದಿಂದಾಗಿ ಕಾರಿನ ಮುಂಭಾಗ ಜಖಂಗೊಂಡಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ, ಸ್ಥಳಕ್ಕೆ ಆಗಮಿಸಿದ ಪುತ್ತೂರು ಸಂಚಾರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.





























