ಪುತ್ತೂರು: ಹಿಂದೂಗಳ ಆರಾಧ್ಯ ದೇವರುಗಳಾದ ಶ್ರೀರಾಮಚಂದ್ರ, ಸೀತಾಮಾತೆ ಮತ್ತು ಹನುಮಂತ ದೇವರ ಬಗ್ಗೆ ಅವಾಚ್ಯ ಪದ ಬಳಸಿ ನಿಂದಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ಸಿನ ಐಟಿ ಸೆಲ್ ಕಾರ್ಯದರ್ಶಿ ಶೈಲಜಾ ಅಮರನಾಥ್ ಮತ್ತು ಇತರರ ವಿರುದ್ಧ ಹಿಂದು ಜಾಗರಣ ವೇದಿಕೆ ಪುತ್ತೂರು ಮತ್ತು ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಜಂಟಿಯಾಗಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಾಂಗ್ರೆಸ್ ನ ಐಟಿ ಸೆಲ್ ಶೈಲಜಾ ಅಮರನಾಥ್, ಪ್ರೀತು ಶೆಟ್ಟಿ ಯಾನೆ ಮಹಾಲಕ್ಷ್ಮೀ, ಕಾಂಗ್ರೆಸ್ ನ ಐಟಿ ಸೆಲ್ ನ ಅನಿಲ್, ಪ್ರವೀಣ್, ಪುನೀತ್ ಮುಂತಾದವರು ಸೇರಿಕೊಂಡು ಸಾಮಾಜಿಕ ಜಾಲತಾಣವಾದ ಕ್ಲಬ್ ಹೌಸ್ ನಲ್ಲಿ ನನ್ನ ಹಿಂದೂ ಧರ್ಮದ ಆರಾಧ್ಯ ದೇವರುಗಳಾದ ಶ್ರೀ ರಾಮಚಂದ್ರ, ಸೀತಾ ಮಾತೆ ಮತ್ತು ಹನುಮಂತ ದೇವರನ್ನು ಕೆಟ್ಟ ಪದಗಳನ್ನು ಬಳಸಿ ಅವಹೇಳನ ಮಾಡಿ ಧರ್ಮ ಭಾವನೆಗೆ ಧಕ್ಕೆ ತಂದಿದ್ದಲ್ಲದೆ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಮಾಡಿ, ಕೋಮು ಭಾವನೆಗಳನ್ನು ಕೆರಳಿಸುವ ಪ್ರಯತ್ನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸಮಾಜದಲ್ಲಿ ಸ್ವಾಸ್ತ್ಯ ಕೆಡದಲು ಪ್ರಯತ್ನಿಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.

























