ಬಂಟ್ವಾಳ: ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕರಾದ ಚಂದ್ರಹಾಸ ಕನ್ಯಾನ ರವರಿಗೆ ಅದೇ ಸಂಘಟನೆಯ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಜೂ.19 ರಂದು ಸಾಲೆತ್ತೂರಿನಲ್ಲಿ ನಡೆದಿದೆ.

ಮಾರಕಾಸ್ತ್ರಗಳೊಂದಿಗೆ ಆಗಮಿಸಿದ 12 ಜನರ ತಂಡವು ಚಂದ್ರಹಾಸ್ ರವರ ಮೇಲೆ ಹಲ್ಲೆ ನಡೆಸಿದ್ದು, ಗಾಯಗೊಂಡ ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..





























