ಕಾರ್ಕಳ: ಜೀಪು ಪಲ್ಟಿಯಾಗಿ ಯುವತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಸಮೀಪ ನಡೆದಿದೆ.
ಕಿನ್ನಿಗೋಳಿಯಿಂದ ಮುಂಡ್ಕೂರು ಕಡೆಗೆ ತೆರಳುತ್ತಿದ್ದ ಜೀಪಿನಲ್ಲಿ ಚಾಲಕನ ಸಹಿತ ಆರು ಮಂದಿ ಪ್ರಯಾಣಿಸುತ್ತಿದ್ದು ಮೂವರು ಗಂಭೀರ ಗಾಯಗೊಂಡಿದ್ದರೆ ಇನ್ನುಳಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಳಾಯಿಯಿಂದ ಖಾಸಗಿ ಕಾರ್ಯಕ್ರಮ ಮುಗಿಸಿ ಹಿಂತಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿತು. ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.