ಬಂಟ್ವಾಳ: ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಮಾಣಿ ದ.ಕ.ಜಿ.ಪ.ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ ನಡೆಯಿತು.

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಅಭಿವೃದ್ಧಿ ಅಧಿಕಾರಿ ಗಿರಿಜಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಮಾಣಿ, ಉಪಾಧ್ಯಕ್ಷೆ ಪುಷ್ಪಲತಾ, ಸದಸ್ಯರಾದ ನಾರಾಯಣ ನಾಯ್ಕ್, ವನಿತಾ, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ, ಶಿಕ್ಷಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.




























