ಪುತ್ತೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳ ಆದೇಶ ಮೇರೆಗೆ ವರ್ಗಾವಣೆಗೊಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಹಾಗೂ ಹಿಂದೆ ತಾಲೂಕು ಆರೋಗ್ಯಾಧಿಕಾರಿ ಯಾಗಿ ಸೇವೆ ಸಲ್ಲಿಸಿದ್ದ ಡಾ. ಅಶೋಕ್ ಕುಮಾರ್ ರೈ ರವರನ್ನು ಪುತ್ತೂರು ತಾಲೂಕು ಆರೋಗ್ಯಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಈ ಮೊದಲು ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ದೀಪಕ್ ರೈ ರವರು ಪ್ರಭಾರ ನೆಲೆಯಲ್ಲಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.