ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತರಗತಿ ನಡೆಯುತ್ತಿರುವ ಸಂದರ್ಭದಲ್ಲಿ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬರುತ್ತಿದ್ದಾರೆ ಎಂದು ಆರೋಪಿಸಿ ಬೆಟ್ಟಂಪಾಡಿ ಕಾಲೇಜಿನ ವಿದ್ಯಾರ್ಥಿಗಳು ಪುತ್ತೂರು ಶಾಸಕ ಸಂಜೀವ ಮಠಂದೂರು ರವರಿಗೆ ದೂರು ನೀಡಿದ್ದಾರೆ.

ಹಿಜಾಬ್ ಧರಿಸಿ ಪಾಠ ಕೇಳುವಂತಿಲ್ಲ ಎಂದು ಹೈಕೋರ್ಟ್ ಆದೇಶವಿದ್ದರೂ ನಮ್ಮ ಕಾಲೇಜಿನಲ್ಲಿ ಕಾನೂನು ಉಲ್ಲಂಘಿಸಿ ಹಿಜಾಬ್‌ನನ್ನು ಧರಿಸಿದ್ದಾರೆ. ಈ ಕುರಿತು ಶಾಲಾ ಪ್ರಾಂಶುಪಾಲರಿಗೆ ಸೂಚನೆ ನೀಡುವಂತೆ ದೂರಿನಲ್ಲಿ ತಿಳಿಸಿದ್ದಾರೆ.
