ವಿಟ್ಲ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಲಾರಿ ಚಾಲಕ ನನ್ನು ವಿಚಾರಿಸಿದಾಗ ಆರೋಪಿ ನ್ಯಾಯ ಬೆಲೆ ಅಂಗಡಿಯವರ ಬಗ್ಗೆ ಮಾಹಿತಿ ನೀಡಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ದಾಖಲಾದ ಪ್ರಕರಣದ ಆಧಾರದಲ್ಲಿ ಬಂಟ್ವಾಳ ತಾಲೂಕು ಬೊಳಂತೂರು ಗ್ರಾಮದ ಅಬೂಬಕರ್, ಮತ್ತು ಹಮೀದ್ ನಾರ್ಶ್ ರನ್ನು ನ್ಯಾಯಬೆಲೆ ಅಂಗಡಿ ಪ್ರಾಧಿಕಾರದಿಂದ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬೋಳಂತೂರು ಸಮೀಪದ ನಾರ್ಶದಿಂದ ಲಾರಿಯಲ್ಲಿ ಸುಮಾರು 15 ಟನ್ ಅಕ್ಕಿಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರ ತಂಡ ಆರೋಪಿ ಮತ್ತು 313 ಗೋಣಿಗಳ 15 ಟನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದರು.
ಈ ವೇಳೆ ವಿಚಾರಣೆ ನಡೆಸಿದಾಗ ಲಾರಿ ಚಾಲಕ ನೀಡಿದ ಮಾಹಿತಿ ಮೇರೆಗೆ ನ್ಯಾಯಬೆಲೆ ಅಂಗಡಿ ಮಾಲೀಕ ಹಮೀದ್ ಮತ್ತು ಅಬೂಬಕ್ಕರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ದಾಖಲಾದ ಪ್ರಕರಣದ ಆಧಾರದಲ್ಲಿ ಬಂಟ್ವಾಳ ತಾಲೂಕು ಬೊಳಂತೂರು ಗ್ರಾಮದ ಅಬೂಬಕರ್, ಮತ್ತು ಹಮೀದ್ ನಾರ್ಶ್ ರನ್ನು ನ್ಯಾಯಬೆಲೆ ಅಂಗಡಿ ಪ್ರಾಧಿಕಾರದಿಂದ ಅಮಾನತು ಮಾಡಲಾಗಿದೆ.




























