ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ.24ರಿಂದ 30ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ ಆಶೀರ್ವದಿಸುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಆಹ್ವಾನಿಸಲಾಯಿತು.
ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ಧರ್ಮಾಧಿಕಾರಿಯವರನ್ನು ಭೇಟಿ ಮಾಡಿ ಆಮಂತ್ರಣ ಪತ್ರ ನೀಡಿ ಆಮಂತ್ರಿಸಲಾಯಿತು. ಎ.24ರಂದು ನಡೆಯುವ ಭಜನಾಮೃತ ಕಾರ್ಯಕ್ರಮದಂದು ಡಾ. ವೀರೇಂದ್ರ ಹೆಗ್ಗಡೆಯವರು ಭಾಗವಹಿಸುವುದು ನಿಗದಿಯಾಗಿದೆ.