ವಿಟ್ಲ : ಅಕ್ರಮ ಗೋ ಸಾಗಾಟದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಪಿಕಪ್ ಸಹಿತ ಓರ್ವನನ್ನು ವಶಕ್ಕೆ ಪಡೆದ ಘಟನೆ ಮಾಣಿಯಲ್ಲಿ ನಡೆದಿದೆ.
ವಶಕ್ಕೆ ಪಡೆದ ಆರೋಪಿಯನ್ನು ಇರಾಮೂಲೆ ನಿವಾಸಿ ಮಹಮ್ಮದ್ ಎಂದು ಗುರುತಿಸಲಾಗಿದೆ.

ಆರೋಪಿಯಿಂದ ಪಿಕಪ್ ವಾಹನ ಹಾಗೂ ದನಗಳನ್ನು ವಶಕ್ಕೆ ಪಡೆದಿದ್ದಾರೆ ಮತ್ತು ಕೃತ್ಯದಲ್ಲಿ ಭಾಗಿಯಾಗಿರುವ ಹಮೀದ್ ಮತ್ತು ಪವನ್ ರಾಜ ನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ದನಗಳನ್ನು ವದೆ ಮಾಡಿ ಮಾಂಸವನ್ನು ಕೇರಳಕ್ಕೆ ಸಾಗಾಟ ಮಾಡುವ ಉದ್ದೇಶದಿಂದ ದನಗಳನ್ನು ಕೊಂಡೊಯ್ಯುತ್ತಿದ್ದರು ತನಿಖೆ ವೇಳೆ ತಿಳಿದು ಬಂದಿದೆ.
ವಿಟ್ಲ ಎಸ್. ಐ ಸಂದೀಪ್ ನೇತೃತ್ವದ ಕಾರ್ಯಾಚರಣೆಯಲ್ಲಿ ಹೇಮರಾಜ್, ಜಯಕುಮಾರ್ ಹಾಗೂ ಅಶೋಕ್ ಸಹಕಾರ ನೀಡಿದರು ಎಂದು ತಿಳಿದು ಬಂದಿದೆ.
























