ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಇದರ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಚಿರಾಗ್ ರೈ ಮೇಗಿನಗುತ್ತು ರವರು ಆಯ್ಕೆಯಾಗಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ.ವಿಶ್ವನಾಥ ರೈ,ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ. ರಾಜಾರಾಮ್,NSUI ಕರ್ನಾಟಕ ರಾಜ್ಯಾಧ್ಯಕ್ಷ ಗಣೇಶ್ ಕೀರ್ತಿ ಹಾಗೂ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಅವರ ಆದೇಶದಂತೆ ನೇಮಕಾತಿ ಮಾಡಲಾಗಿದೆ.
ಇವರು ಮುಂಡೂರು ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಯತೀಶ್ ರೈ ಮೇಗಿನಗುತ್ತು ಹಾಗೂ ಮುಂಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆಯಾದ ಯೋಗಿನಿ ರೈ ರವರ ಪುತ್ರರಾಗಿದ್ದು, ಪ್ರಸ್ತುತ ಪುತ್ತೂರು ತಾಲೂಕಿನ ನೆಹರುನಗರದ ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಬಿ.ಎ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

























