ಪುತ್ತೂರು: ಹೃದಯಾಘಾತದಿಂದಾಗಿ ಸಾವನ್ನಪ್ಪಿದ ವಕೀಲೆ ಶ್ಯಾಮಲಾ ಹೆಗ್ಡೆ ರವರಿಗೆ ಪುತ್ತೂರು ವಕೀಲರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ವಕೀಲರ ಸಂಘದ ಅಧ್ಯಕ್ಷ ಮನೋಹರ ಕೆವಿ ರವರು ಶ್ರದ್ಧಾಂಜಲಿ ಸಲ್ಲಿಸಿದರು. ಹಿರಿಯ ನ್ಯಾಯವಾದಿಗಳಾದ ರಾಮಮೋಹನ್ ರಾವ್, ಅರಂತನಡ್ಕ ಬಾಲಕೃಷ್ಣ ರೈ,ಉದಯಶಂಕರ ಶೆಟ್ಟಿ, ಜಗನ್ನಾಥ ರೈ ನುಡಿನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಚಿನ್ಮಯ್ ರೈ, ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಕಕ್ವೆ, ಕೋಶಾಧಿಕಾರಿ ಶ್ಯಾಮ್ ಪ್ರಸಾದ್ ಕೈಲಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.



























