ದೇಶಾದ್ಯಂತ ವಿರೋಧ ವ್ಯಕ್ತವಾಗಿದ್ದ ಅಗ್ನಿಪಥ್ ಯೋಜನೆಗೆ ಅರ್ಜಿ ಆಹ್ವಾನಿಸಿದ ಮೂರೇ ದಿನದಲ್ಲಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ವಾಯುಪಡೆ ತಿಳಿಸಿದೆ.
ವಾಯುಪಡೆಯಲ್ಲಿ ಯುವಕರಿಂದ ನಿರೀಕ್ಷೆಗೂ ಮೀರಿ ಅರ್ಜಿ ಸಲ್ಲಿಕೆಯಾಗಿದ್ದು, 3 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಮೂರೇ ದಿನದಲ್ಲಿ ಬರೋಬ್ಬರಿ 56 ಸಾವಿರದ 960 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ವಾಯುಪಡೆ ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ 5ರವರೆಗೆ ಅರ್ಜಿ ಸಲ್ಲಿಸಲು ಕೊನೆಯ ಅವಕಾಶವಿದೆ ಅಂತಾ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸಕ್ತ ವರ್ಷದಲ್ಲಿ 3 ಸಾವಿರ ಅಗ್ನಿವೀರರ ಆಯ್ಕೆಗೆ ಮಾತ್ರ ಅವಕಾಶವಿದ್ದು, ಒಂದು ಪರೀಕ್ಷೆ ಹಾಗೂ ಆರೋಗ್ಯ ತಪಾಸಣೆ ಬಳಿಕ ಇದೇ ಡಿಸೆಂಬರ್ ತಿಂಗಳಿನಿಂದ ತರಬೇತಿ ಪ್ರಾರಂಭಿಸಲಾಗುವುದು ಎಂದು ವಾಯುಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


























