ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ. 26 ರಂದು ಕ್ಲಬ್ ನ ಅಧ್ಯಕ್ಷ ಬಿ ಸಂದೇಶ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.

ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಜಿಲ್ಲಾ ಜಿ .ಎಲ್ .ಟಿ. ಕೋ ಆರ್ಡಿನೇಟರ್ ಲಯನ್ ಕುಡುಪಿ ಅರವಿಂದ ಶೆಣೈ, ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕ್ಲಬ್ ನ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಏಳು ಜನ ಹೊಸತಾಗಿ ನೂತನ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಎಸ್ ಎಸ್ ಎಲ್ ಸಿ ಯ 2021-22ನೇ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಕ್ಲಬ್ ನ ಸದಸ್ಯರ ಮಕ್ಕಳನ್ನು ಗೌರವಿಸಲಾಯಿತು.


ವೇದಿಕೆಯಲ್ಲಿ ಲಯನ್ಸ್ ಜಿಲ್ಲಾ ದ್ವಿತೀಯ ಉಪರಾಜ್ಯಪಾಲೆ, ಲಯನ್ ಬಿಎಂ ಭಾರತಿ, ಜಿಲ್ಲಾ ಸಂಪುಟ ಕಾರ್ಯದರ್ಶಿ ಲಯನ್ ಅನಿಲ್ ಕುಮಾರ್, ಪ್ರಾಂತೀಯ ಅಧ್ಯಕ್ಷ ಹೇಮನಾಥ ಶೆಟ್ಟಿ, ನಿಯೋಜಿತ ಪ್ರಾಂತಿಯ ಅಧ್ಯಕ್ಷ ಲಯನ್ ಸುದರ್ಶನ್ ಪಡಿಯಾರ್, ವಲಯ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಮಮತಾ ಶೆಣೈ, ಕ್ಲಬ್ ಕಾರ್ಯದರ್ಶಿ ಹರೀಶ್ ಶೆಟ್ಟಿ ಡಿ, ಕೋಶಾಧಿಕಾರಿ, ಓ. ಎ. ಕೃಷ್ಣ, ಅನಿತಾ ಹೇಮನಾಥ ಶೆಟ್ಟಿ, ಗೈಡಿಂಗ್ ಲಯನ್ ಸತೀಶ್ ಆಳ್ವ ಇರಬಾಳಿಕೆ ಮುಂತಾದವರು ಉಪಸ್ಥಿತರಿದ್ದರು. ನಿಕಟಪೂರ್ವ ಕೋಶಾಧಿಕಾರಿ ಶ್ವೇತ ರವಿಕುಮಾರ್ ಕಾರ್ಯಕ್ರಮವನ್ನು ನಿರ್ವಹಿಸಿದರು.





























