ಮಂಗಳೂರು: ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಪೋಲಿಸ್ ಅಧಿಕಾರಿಗಳ ವರ್ಗಾವಣೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪೈಕಿ ಇಬ್ಬರು ಪೋಲಿಸ್ ಅಧಿಕಾರಿಗಳ ವರ್ಗಾವಣೆಯಾಗಿದೆ.
ಮಂಗಳೂರು ನಗರ ಕಾನೂನು ಸುವ್ಯವಸ್ಥೆ ಡಿಸಿಪಿ ಹರಿರಾಂ ಶಂಕರ್ ರವರನ್ನು ಹಾಸನ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಬಂಟ್ವಾಳ ಉಪ ವಿಭಾಗ ಎಎಸ್ಪಿಯಾಗಿದ್ದ ಶಿವಾಂಶು ರಜಪೂತ್ ರವರನ್ನು ಹುಮ್ನಾಬಾದ್ ಉಪವಿಭಾಗ ಎಎಸ್ಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.