ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಶ್ರೀ ಗೋಪಾಲಕೃಷ್ಣ ಮಂದಿರ ವೇದಿಕೆಯಲ್ಲಿ ‘ಸ್ಥಾಪಕರ ದಿನಾಚರಣೆ’ ನಡೆಯಿತು.

ಮುಖ್ಯ ಅತಿಥಿಗಳಾದ ಸುರೇಶ್ ಶೆಟ್ಟಿ ಮಾತನಾಡಿ, ಜಯರಾಮ ಕೆದಿಲಾಯ ಹಾಗೂ ಅವರ ಗೆಳೆತನದ ನೆನಪು ಮಾಡಿಕೊಂಡರು. ಹಾಗೂ ಇನ್ನೋರ್ವ ಅತಿಥಿಗಳಾದ ರಮಣ್ ಆಚಾರ್ ಮಾತನಾಡಿ, ಅಧ್ಯಕ್ಷರಿಗೆ ಶುಭ ಹಾರೈಸಿದರು. ನಂತರ ಆಡಳಿತ ಮಂಡಳಿಯ ಸದಸ್ಯರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮಾತನಾಡಿ ಅಧ್ಯಕ್ಷರಿಗೆ ಜನ್ಮದಿನದ ಶುಭಾಶಯ ಕೋರಿದರು. ಶಾಲಾ ಸಂಚಾಲಕರು ಮಾತನಾಡಿ ಅಧ್ಯಕ್ಷರಿಗೆ ಶುಭ ಹಾರೈಸಿದರು.
ಜನ್ಮದಿನದ ಪ್ರಯುಕ್ತ ಅತಿಥಿಗಳಿಂದ, ಶಿಕ್ಷಕರಿಂದ ಹಾಗೂ ಆಡಳಿತ ಮಂಡಳಿ ಸದಸ್ಯರಿಂದ ಅಧ್ಯಕ್ಷರಿಗೆ ಹಾರಾರ್ಪಣೆ ಮಾಡಿ ಗೌರವಿಸಲಾಯಿತು. ಅಧ್ಯಕ್ಷರಾದ ಜಯರಾಮ ಕೆದಿಲಾಯ ಶಿಬರ ಮಾತನಾಡುತ್ತ ಸಂಸ್ಥೆ ಉತ್ತಮ ರೀತಿಯಲ್ಲಿ ಬೆಳೆಯುತ್ತಿರುವುದಕ್ಕೆ ಮತ್ತು ಉತ್ತಮ ಫಲಿತಾಂಶಕ್ಕಾಗಿ ಸಂತಸ ವ್ಯಕ್ತಪಡಿಸಿದರು.
ಸಭಾ ಕಾರ್ಯಕ್ರಮದ ನಂತರ ಅಯನಾ ರಾಮಣ್ ಉಡುಪಿ ಭರತನಾಟ್ಯ ಕಾರ್ಯಕ್ರಮ ಜರಗಿತು. ಶಾಲಾ ಮುಖ್ಯೋಪಾಧ್ಯಾಯರಾದ ಜಯಮಾಲಾ ವಿ ಎನ್ ರವರು ಸ್ವಾಗತಿಸಿದರು. ಸಹಶಿಕ್ಷಕ ರವಿಶಂಕರ್ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಪ್ರಮೀಳಾ ವಂದಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಜಯರಾಮ ಕೆದಿಲಾಯ ಶಿಬರ,ಮುಖ್ಯ ಅತಿಥಿಗಳಾದ ಅಂಬಿಕಾ ವಿದ್ಯಾಸಂಸ್ಥೆಗಳ ನಿವೃತ್ತ ಪ್ರಾಂಶುಪಾಲರಾದ ಸುರೇಶ್ ಶೆಟ್ಟಿ, ಅತಿಥಿಗಳಾದ ಪುತ್ತಿಗೆ ಮಠದ ಸಾರ್ವಜನಿಕ ಸಂಪರ್ಕಾಧಿಕಾರಿ ರಮಣ ಆಚಾರ್, ಸಂಚಾಲಕರಾದ ಶ ಭಾಸ್ಕರ ಆಚಾರ್ ಹಿಂದಾರು, ಕಾರ್ಯದರ್ಶಿಗಳಾದ ಕೃಷ್ಣ ಪ್ರಸಾದ್ ಕೆದಿಲಾಯ, ಆಡಳಿತ ಮಂಡಳಿಯ ಸದಸ್ಯರಾದ ಹರೀಶ್ ಪುತ್ತೂರಾಯ, ಪ್ರಸನ್ನ ಭಟ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಜಯಮಾಲಾ ವಿ ಎನ್, ಶಿಕ್ಷಕ – ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



























