ಸುಳ್ಯ: ತನ್ನ ನಾಲ್ಕು ವರ್ಷದ ಮಗಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿ ತಾಯಿ ಸಾವನ್ನಪ್ಪಿ, ಮಗಳು ಅದೃಷ್ಟವಶಾತ್ ಬದುಕುಳಿದ ಘಟನೆ ಸುಳ್ಯದ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ.
ಅಗ್ನಿಶಾಮಕ ದಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಎನ್ನೆಂಸಿಯಲ್ಲಿ ಕ್ಲರ್ಕ್ ಆಗಿರುವ ಗೀತಾ ತನ್ನ 4 ವರ್ಷದ ಮಗಳು ಪೂರ್ವಿಕಾಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮುಂಜಾನೆ ಎದ್ದಾಗ ಗೀತಾ ಮನೆಯಲ್ಲಿ ಇಲ್ಲದಿರುವುದನ್ನು ಕಂಡು ಹುಡುಕಾಡಿದಾಗ ಬಾವಿಯಲ್ಲಿ ಮಗಳು ಮತ್ತು ಪತ್ನಿ ಬಿದ್ದಿರುವುದು ಕಂಡು ಬಂದಿದೆ.
ಮಗಳು ಬಾವಿಯೊಳಗೆ ಕಲ್ಲಿನ ಸಹಾಯದಿಂದ ಬದುಕುಳಿದಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.




























