ವಿಟ್ಲ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡವನ್ನು ಉದ್ಘಾಟಿಸಲಾಯಿತು. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಸಂಗೀತಾ, ಜಗದೀಶ ಪಾಣೆಮಜಲು, ಉದ್ಯಮಿ ಸುಬ್ರಾಯ ಪೈ, ಪ್ರಾಂಶುಪಾಲ ಬಾಲಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.






























